ಯುವರಾಜ್ ಕುಮಾರ್ ಜೊತೆ ವಿಚ್ಛೇದನದ ಬಗ್ಗೆ ಶ್ರೀದೇವಿಯವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ!! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಯುವರಾಜ್ ಕುಮಾರ್ ರವರ ವಿಚ್ಛೇದನ ನೋಟೀಸ್‌ಗೆ ಹಾಗೂ ಅವರು ಮಾಡಿರುವ ಆರೋಪದ ಬಗ್ಗೆ ಅಮೇರಿಕಾದಲ್ಲಿರುವ ಶ್ರೀದೇವಿಯವರು ಕೊನೆಗೂ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಶ್ರೀದೇವಿರವರು ಇದಕ್ಕೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ ಹಾಗೂ ಯುವರಾಜ್ ಕುಮಾರ್‌ಗೆ ಹಿಂತಿರುಗಿ ನೋಟಿಸ್ ಅನ್ನು ಕಳುಹಿಸಿದ್ದಾರೆ.
ಶ್ರೀದೇವಿ ರವರು ಯುವರಾಜ್ ಕುಮಾರ್ ಮಾಡಿರುವ ಆರೋಪಕ್ಕೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸತ್ಯ ಯಾವಾಗಲೂ ಮೇಲುಗೈ ಸಾಧಿಸುತ್ತದೆ ಎಂಬ ಶೀರ್ಷಿಕೆಯೊಂದಿಗೆ, ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ. ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ, ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೆ. ಆದರೆ ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ” ಎಂದು ಪೋಸ್ಟ್ ಮಾಡಿದ್ದಾರೆ.
ಶ್ರೀದೇವಿ ರವರ ಮೇಲೆ ಮಾಡಿರುವ ಆರೋಪದ ಬಗ್ಗೆ ಶ್ರೀದೇವಿ ರವರ ತಂದೆ ಕೂಡ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಶ್ರೀದೇವಿ ರವರ ತಂದೆ ದೊಡ್ಮನೆಗೆ ತಮ್ಮ ಮಗಳನ್ನು ಕೊಟ್ಟು ತಪ್ಪು ಮಾಡಿರುವುದಾಗಿ ಹಾಗೂ ತಮ್ಮ ಮಗಳಿಗೆ ಚಿತ್ರಹಿಂಸೆ ನೀಡಿರುವುದಾಗಿ ತಿಳಿಸಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್ ಹಾಗೂ ಅವರ ಪತ್ನಿಯೂ ಕೂಡ ಶ್ರೀದೇವಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ https://flixoye.com ನ್ನು ಫಾಲೋ ಮಾಡಿ