“ಸಂಕ್ರಾಂತಿ”ಗೆ ಯಜಮಾನನ ಮೊದಲ ಹಾಡು

Published on

507 Views

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಯಜಮಾನ ಚಿತ್ರದ
ಚಿತ್ರೀಕರಣ ಬಹುತೇಕ ಮುಕ್ತಾಯವಾಗಿ ಬಿಡುಗಡೆಯ ಹೊಸ್ತಿಲಿಗೆ ಬಂದಿದೆ.
ಈಗಾಗಲೇ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ
ಮೊದಲಹಾಡು ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಲಿದ್ದಾರೆ‌.
ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರು ನಿರ್ಮಾಣ ಮಾಡಿರುವ ಈ
ಚಿತ್ರವನ್ನು ಪಿ.ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಇನ್ನು ಈ ಚಿತ್ರಕ್ಕೆ ವಿ.ಹರಿಕೃಷ್ಣ ಅವರು ಸಂಗೀತ ಸಂಯೋಜನೆ ಮಾಡಿದ್ದು, ಬಹದ್ದೂರ್ ಚೇತನ್ ಅವರು ಸಂಭಾಷಣೆ ಬರೆದಿದ್ದಾರೆ.

ದರ್ಶನ್ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಕಾಣಿಸಿಕೊಂಡಿದ್ದಾರೆ. ವಿಶೇಷ ಪಾತ್ರವೊಂದರಲ್ಲಿ ಡಾಲಿ ಧನಂಜಯ್ ಅವರು ನಟಿಸಿದ್ದಾರೆ‌. ಉಳಿದಂತೆ ಠಾಕೂರ್ ಅನೂಪ್ ಸಿಂಗ್, ದೇವರಾಜ್ ಸೇರಿದಂತೆ ಬಹುದೊಡ್ಡ ತಾರಬಳಗ ಈ ಚಿತ್ರದಲ್ಲಿದೆ.‌

Copyright ©2026 . All Rights Reserved. privacy | terms Whatsapp: 9538193653 Email: hello@flixoye.com