ಫೆಬ್ರವರಿಯಲ್ಲಿ “ಯಜಮಾನ”ನ ದರ್ಶನ

Published on

346 Views

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರವು ದಿನದಿಂದ ದಿನಕ್ಕೆ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚು ಮಾಡುತ್ತಿದೆ. ಈಗಾಗಲೇ ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಮೂರು ಹಾಡುಗಳು
ಸೂಪರ್ ಹಿಟ್ ಆಗುತ್ತಿದ್ದು ಕೇಳುಗರ ಮೆಚ್ಚುಗೆ ಪಡೆದುಕೊಂಡಿವೆ. ಇನ್ನು ಈ ಚಿತ್ರದ ಟ್ರೈಲರ್ ಹಾಗೂ ಇನ್ನುಳಿದ ಹಾಡುಗಳು ಮುಂದಿನವಾರ ಬಿಡುಗಡೆಯಾಗಲಿವೆ. ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರು ಮೀಡಿಯಾ
ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದು, ಪಿ.ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ದರ್ಶನ್ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಕಾಣಿಸಿಕೊಂಡಿದ್ದಾರೆ. ವಿಶೇಷ ಪಾತ್ರವೊಂದರಲ್ಲಿ ಡಾಲಿ ಧನಂಜಯ್ ಅವರು ನಟಿಸಿದ್ದಾರೆ‌.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com