‘ಕೆಜಿಎಫ್ 2’ ಟೀಸರ್ ಲೀಕ್‌ ಮಾಡಿದವರಿಗೆ ದೇವರು ಒಳ್ಳೆಯದು ಮಾಡಲಿ ಎಂದ ಯಶ್

Published on

536 Views
Advertisement

ಯಶ್ ಅಭಿನಯದ ‘ಕೆಜಿಎಫ್ 2’ ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆಯಾಗಿದ್ದು ಭರ್ಜರಿ ಸೌಂಡ್ ಮಾಡುತ್ತಿದೆ. ಮೆಷಿನ್ ಗನ್ ನಲ್ಲಿ ಬುಲೆಟ್ ಹಾರಿಸಿ, ಆ ಕಾದ ಗನ್ನಿನ ನಳಿಕೆ ಮೂಲಕ ರಾಕಿಂಗ್ ಸ್ಟಾರ್ ಯಶ್ ಸಿಗರೇಟ್ ಹಚ್ಚಿಕೊಳ್ಳುವ ದೃಶ್ಯ ಅಭಿಮಾನಿಗಳನ್ನು ಫಿದಾ ಪಡಿಸಿದೆ. ರವೀನಾ ಟಂಡನ್ ರಾಜಕಾರಣಿ ಲುಕ್ ನಲ್ಲಿ ಮಿಂಚಿದ್ದು, ಸಂಜಯ್ ದತ್ ಹಾಗೂ‌ ಯಶ್ ಸಖತ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Advertisement

‘ಕೆಜಿಎಫ್ 1’ ಚಿತ್ರದಲ್ಲಿ “ಪವರ್ ಫುಲ್ ಪೀಪಲ್ ಕೇಮ್ ಫ್ರಮ್ ಪವರ್ ಫುಲ್ ಪ್ಲೇಸಸ್” ಎನ್ನುವ ಡೈಲಾಗ್ ಇತ್ತು. ಈಗ ‘ಕೆಜಿಎಫ್ 2’ ನಲ್ಲಿ “ಪವರ್ ಫುಲ್ ಪೀಪಲ್ ಮೇಕ್ ಪ್ಲೇಸಸ್ ಪವರ್ ಫುಲ್” ಎನ್ನುವ ಡೈಲಾಗ್ ಬಳಸಲಾಗಿದ್ದು, ಸಖತ್ ಥ್ರಿಲ್ ನೀಡಿದೆ. ‘ಕೆಜಿಎಫ್ 2’ ಚಿತ್ರದ ಟೀಸರ್ ಇಂದು‌(ಜ.8) ಯಶ್ ಹುಟ್ಟುಹಬ್ಬದ ದಿನ ಬೆಳಿಗ್ಗೆ 10.18ಕ್ಕೆ ಬಿಡುಗಡೆಯಾಗಬೇಕಿತ್ತು. ಅದರೆ ನಿನ್ನೆ ರಾತ್ರಿಯೇ ಟೀಸರ್ ರಿಲೀಸ್ ಮಾಡಲಾಗಿದೆ. ಚಿತ್ರದ ಟೀಸರ್ ಲೀಕ್‌ ಆಗಿದ್ದು, ಈ ಬಗ್ಗೆ ಮಾತನಾಡಿದ ಯಶ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ‌ ಹಾಕುವ ಮೂಲಕ ಹೇಳಿಕೆ ನೀಡಿದ್ದಾರೆ. “ಯಾರೋ ಪುಣ್ಯಾತ್ಮರು, ಮಹಾನುಭವರು ಟೀಸರ್ ಲೀಕ್ ಮಾಡಿದ್ದಾರೆ. ಅವರಿಗೆ ಇದರಿಂದ ಏನು‌ ಖುಷಿ‌ ಸಿಗುತೋ ಗೊತ್ತಿಲ್ಲ. ದೇವರು ಅವರಿಗೆ ಒಳ್ಳೆಯದು ಮಾಡಲಿ. ಅಭಿಮಾನಿಗಳು‌ ನಿರಾಶರಾಗುವುದು ಬೇಡ. ಇದು‌ ಟೀಸರ್, ಮುಂದಿದೆ‌ ಸಿನಿಮಾ” ಎಂದಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com